ಸಮಾನತೆ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತ್ಯುತ್ಸವ ಹಾಗೂ ಅಭಿನಂದನಾ ಸಮಾರಂಭ ವಿಜೃಂಭಣೆಯಿಂದ

📰 BYVNEWS | ಮಂಗಳೂರು

ಸಮಾನತೆ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತ್ಯುತ್ಸವ ಹಾಗೂ ಅಭಿನಂದನಾ ಸಮಾರಂಭ ವಿಜೃಂಭಣೆಯಿಂದ

ಮಂಗಳೂರು: ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಮಾನವೀಯ ಮೌಲ್ಯಗಳ ಪ್ರತಿಪಾದಕರಾದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತ್ಯುತ್ಸವ ಹಾಗೂ ಅಭಿನಂದನಾ ಸಮಾರಂಭ ಮಂಗಳೂರಿನ ಕುದ್ಮುಲ್ ರಂಗರಾವ್ ಹಾಲ್‌ನಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಸೋಲೂರು ಮಹಾಸಂಸ್ಥಾನ ಮಠದ ಶ್ರೀ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿಯವರು ವಹಿಸಿ ಆಶೀರ್ವಚನ ನೀಡಿದರು.

ಕಾರ್ಯಕ್ರಮವನ್ನು ಕೆಪಿಸಿಸಿ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಬಿ.ಕೆ. ಹರಿಪ್ರಸಾದ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನಾರಾಯಣ ಗುರುಗಳ “ಒಂದೇ ಜಾತಿ, ಒಂದೇ ಮತ, ಒಂದೇ ದೇವರು” ಎಂಬ ಮಹತ್ವದ ಸಂದೇಶವು ಇಂದಿನ ಸಮಾಜಕ್ಕೆ ಅತ್ಯಂತ ಅಗತ್ಯವಾಗಿದೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಯಾಗಿ ಕುಂದಾಪುರ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಶ್ರೀ ಅಶೋಕ್ ಪೂಜಾರಿ ಬೀಜಾಡಿ ಅವರು ಉಪಸ್ಥಿತರಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಿ ಗೌರವಿಸಿದರು.

ಸಮಾರಂಭದಲ್ಲಿ ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷರಾದ ಶ್ರೀ ನವೀನ್ ಚಂದ್ರ ಸುವರ್ಣ, ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ವಿ. ಸುನೀಲ್ ಕುಮಾರ್ ಸೇರಿದಂತೆ ವಿವಿಧ ತಾಲೂಕುಗಳ ಬಿಲ್ಲವ ಸಂಘಗಳ ಅಧ್ಯಕ್ಷರುಗಳಾದ ಶ್ರೀ ಜಯ ವಿಕ್ರಮ್ ಕಲ್ಲಾಪು, ಶ್ರೀ ಸತೀಶ್ ಕುಮಾರ್ ಕೆಡಿಂಜೆ, ಶ್ರೀ ಭುವನೇಶ್ ಪಚ್ಚಿನಡ್ಕ, ಶ್ರೀಮತಿ ಸುಮಲತಾ ಎನ್. ಸುವರ್ಣ, ಶ್ರೀ ಶಶಿಧರ್ ಎಂ. ಅಮೀನ್ ಹಾಗೂ ಶ್ರೀ ಪ್ರಮಲ್ ಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

“ಒಂದೇ ಜಾತಿ, ಒಂದೇ ಮತ, ಒಂದೇ ದೇವರು” — ಬ್ರಹ್ಮಶ್ರೀ ನಾರಾಯಣ ಗುರುಗಳ ಈ ಮಹಾನ್ ತತ್ವವು ಸದಾ ಸಮಾಜವನ್ನು ಸಮಾನತೆ, ಸಹೋದರತ್ವ ಮತ್ತು ಮಾನವೀಯತೆಯ ಹಾದಿಯಲ್ಲಿ ಮುನ್ನಡೆಸಲಿ.

– ಶ್ರೀ ಅಶೋಕ್ ಪೂಜಾರಿ ಬೀಜಾಡಿ
ಅಧ್ಯಕ್ಷರು, ಬಿಲ್ಲವ ಸಮಾಜ ಸೇವಾ ಸಂಘ (ರಿ.), ಕುಂದಾಪುರ

BYVNEWS | ನೇರ • ದಿಟ್ಟ • ನಿರಂತರ

Leave a Reply

Your email address will not be published. Required fields are marked *