ಮಂಗಳೂರಿನ ದಸರಾ ಮಹೋತ್ಸವಕ್ಕೆ ಸಿದ್ಧತೆ:ಸೆ.20ರಂದು ಪೂರ್ವಭಾವಿ ಸಮಾಲೋಚನಾ ಸಭೆ

📰 BYVNEWS ವಿಶೇಷ ವರದಿ

ಮಂಗಳೂರಿನ ದಸರಾ ಮಹೋತ್ಸವಕ್ಕೆ ಸಿದ್ಧತೆ:
ಸೆ.20ರಂದು ಪೂರ್ವಭಾವಿ ಸಮಾಲೋಚನಾ ಸಭೆ

ಮಂಗಳೂರು: ಕರಾವಳಿಯ ಪ್ರಸಿದ್ಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ವೈಭವವಾಗಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭಗೊಂಡಿವೆ.

ಕ್ಷೇತ್ರದ ನವೀಕರಣದ ರೂವಾರಿ ಹಾಗೂ ಹಿರಿಯ ಮಾರ್ಗದರ್ಶಕರಾದ ಶ್ರೀ ಬಿ. ಜನಾರ್ದನ ಪೂಜಾರಿ ಅವರ ನೇತೃತ್ವದಲ್ಲಿ ಅಕ್ಟೋಬರ್ 11ರಿಂದ 21ರವರೆಗೆ ನಡೆಯಲಿರುವ ಮಂಗಳೂರು ದಸರಾ ಮಹೋತ್ಸವವನ್ನು ಯಶಸ್ವಿಯಾಗಿ ಹಾಗೂ ಭಕ್ತಿಪೂರ್ವಕವಾಗಿ ಆಚರಿಸುವ ಹಿನ್ನೆಲೆಯಲ್ಲಿ ಪೂರ್ವಭಾವಿ ಸಮಾಲೋಚನಾ ಸಭೆ ಆಯೋಜಿಸಲಾಗಿದೆ.

ಸೆಪ್ಟೆಂಬರ್ 20ರಂದು ಭಾನುವಾರ ಬೆಳಗ್ಗೆ 11 ಗಂಟೆಗೆ ಶ್ರೀಕ್ಷೇತ್ರದ ಸಭಾಂಗಣದಲ್ಲಿ ಸಭೆ ನಡೆಯಲಿದೆ.

ದಸರಾ ಮಹೋತ್ಸವದ ವಿವಿಧ ಕಾರ್ಯಕ್ರಮಗಳು, ವ್ಯವಸ್ಥೆಗಳು ಹಾಗೂ ಭಕ್ತರಿಗೆ ಅಗತ್ಯವಿರುವ ಸೌಲಭ್ಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಕ್ಷೇತ್ರದ ಭಕ್ತರು, ಹಿತೈಷಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಮೂಲ್ಯ ಸಲಹೆ-ಸಹಕಾರ ನೀಡುವಂತೆ ಮನವಿ ಮಾಡಲಾಗಿದೆ.

ಭಕ್ತಿ, ಶ್ರದ್ಧೆ ಮತ್ತು ಸಾಂಸ್ಕೃತಿಕ ವೈಭವದ ಪ್ರತೀಕವಾಗಿರುವ ಮಂಗಳೂರು ದಸರಾವನ್ನು ಮತ್ತಷ್ಟು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ.

#ಮಂಗಳೂರುದಸರಾ #ಮಂಗಳೂರು #ಕುದ್ರೋಳಿ #ಗೋಕರ್ಣನಾಥಕ್ಷೇತ್ರ #ಶ್ರೀಗೋಕರ್ಣನಾಥಕ್ಷೇತ್ರ #ದಸರಾಮಹೋತ್ಸವ #ಮಂಗಳೂರುದಸರಾಮಹೋತ್ಸವ #ಕುದ್ರೋಳಿದಸರಾ #ನವರಾತ್ರಿ #ದಸರಾ #ಕರ್ನಾಟಕ #ಕರಾವಳಿ #ಧಾರ್ಮಿಕ #ಸಾಂಸ್ಕೃತಿಕ #ಭಕ್ತಿಸಂದೇಶ #ಶ್ರೀಬಿಜನಾರ್ದನಪೂಜಾರಿ #BYVNEWS #ನೇರದಿಟ್ಟನಿರಂತರ #ಸತ್ಯಧರ್ಮನ್ಯಾಯ #MangaloreDasara #Mangalore #Kudroli #DasaraMahotsava #BYVNEWS

Leave a Reply

Your email address will not be published. Required fields are marked *