🔴 ಬೆಳ್ತಂಗಡಿಯಲ್ಲಿ SNGV ತಾಲೂಕು ಸಮಿತಿ ರಚನೆ

🔴 ಬೆಳ್ತಂಗಡಿಯಲ್ಲಿ SNGV ತಾಲೂಕು ಸಮಿತಿ ರಚನೆ

ಅ.11ರ ಜಿಲ್ಲಾ–ತಾಲೂಕು ಸಮಿತಿ ಪದಗ್ರಹಣ ಕಾರ್ಯಕ್ರಮಕ್ಕೆ ಸಿದ್ಧತೆ

ಬೆಳ್ತಂಗಡಿ: ಶ್ರೀ ನಾರಾಯಣ ಗುರು ವಿಚಾರ ವೇದಿಕೆ (ರಿ.) ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಬೆಳ್ತಂಗಡಿ ತಾಲೂಕು ಸಮಿತಿ ರಚನೆ ಹಾಗೂ ಅಕ್ಟೋಬರ್ 11ರಂದು ನಡೆಯಲಿರುವ ಜಿಲ್ಲಾ ಮತ್ತು ತಾಲೂಕು ಸಮಿತಿ ಪದಗ್ರಹಣ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು ಬೆಳ್ತಂಗಡಿಯ ಶ್ರೀ ಗುರು ನಾರಾಯಣ ಸ್ವಾಮಿ ಸಭಾಂಗಣದಲ್ಲಿ ನಡೆಯಿತು.

SNGV ಸಂಘಟನೆಯ ರಾಜ್ಯಾಧ್ಯಕ್ಷರಾದ ಸತ್ಯಜಿತ್ ಸುರತ್ಕಲ್ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಸಂಘಟನೆಯ ಪ್ರಮುಖರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಸಭೆಯಲ್ಲಿ ಬೆಳ್ತಂಗಡಿ ತಾಲೂಕು ಘಟಕದ ಸಂಘಟನಾ ಚಟುವಟಿಕೆಗಳು, ಮುಂದಿನ ಕಾರ್ಯಕ್ರಮಗಳ ರೂಪುರೇಷೆ ಹಾಗೂ ಪದಗ್ರಹಣ ಸಮಾರಂಭದ ಸಿದ್ಧತೆಗಳ ಕುರಿತು ಚರ್ಚಿಸಲಾಯಿತು.

ಅಕ್ಟೋಬರ್ 11ರಂದು ನಡೆಯಲಿರುವ ಜಿಲ್ಲಾ ಹಾಗೂ ತಾಲೂಕು ಸಮಿತಿ ಪದಗ್ರಹಣ ಕಾರ್ಯಕ್ರಮದ ಅಂಗವಾಗಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು.

ಶ್ರೀ ನಾರಾಯಣ ಗುರುಗಳ ತತ್ವ, ಸಂದೇಶ ಹಾಗೂ ಸಾಮಾಜಿಕ ಸಮಾನತೆಯ ಆಶಯಗಳನ್ನು ಜನಮಾನಸಕ್ಕೆ ತಲುಪಿಸುವ ನಿಟ್ಟಿನಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಸಂಕಲ್ಪದೊಂದಿಗೆ ಕಾರ್ಯಕ್ರಮ ನಡೆಯಿತು.

ಗುರುದೇವ 🙏

📍 ಬೆಳ್ತಂಗಡಿ | ದಕ್ಷಿಣ ಕನ್ನಡ

BYVNEWS | ಜನರ ಧ್ವನಿ • ನಿಖರ ಸುದ್ದಿ • ನೇರ ವರದಿ

#BYVNEWS #ಬೆಳ್ತಂಗಡಿ #SNGV #ಶ್ರೀನಾರಾಯಣಗುರು #ದಕ್ಷಿಣಕನ್ನಡ #ಸಮಿತಿರಚನೆ #ಪದಗ್ರಹಣ #ಗುರುದೇವ

Leave a Reply

Your email address will not be published. Required fields are marked *