ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅದ್ದೂರಿ ದಸರಾ ಮಹೋತ್ಸವಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ

📰 BYVNEWS | ಮಂಗಳೂರು ಮಹಾದಸರಾ – 2026

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅದ್ದೂರಿ ದಸರಾ ಮಹೋತ್ಸವಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ

ಮಂಗಳೂರು: ಕರಾವಳಿಯ ಪ್ರಸಿದ್ಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಉತ್ಸವವಾದ ಮಂಗಳೂರು ದಸರಾ – 2026ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ.ಕೆ. ಶಿವಕುಮಾರ್ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವೀಕರಣದ ರೂವಾರಿ, ಮಾಜಿ ಕೇಂದ್ರ ಸಚಿವರಾದ ಶ್ರೀ ಬಿ. ಜನಾರ್ದನ ಪೂಜಾರಿ, ಸಚಿವರಾದ ಜಮೀರ್ ಅಹ್ಮದ್ ಖಾನ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್, ಉಪಸಭಾಪತಿ ಮಾಂಕಾಳ ವೈದ್ಯ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಮಾಜಿ ಸಚಿವರಾದ ಬಿ. ರಮಾನಾಥ ರೈ, ಅಭಯಚಂದ್ರ ಜೈನ್ ಹಾಗೂ ವಿನಯ ಕುಮಾರ್ ಸೊರಕೆ ಉಪಸ್ಥಿತರಿದ್ದರು.

ಅಲ್ಲದೆ, ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಮತ್ತು ಐವನ್ ಡಿಸೋಜಾ, ಶಾಸಕ ವೇದವ್ಯಾಸ ಕಾಮತ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ. ಎ. ಗಫೂರ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಭಕ್ತಿ, ಸಂಸ್ಕೃತಿ, ಸೌಹಾರ್ದತೆ ಹಾಗೂ ಧಾರ್ಮಿಕ ಪರಂಪರೆಯ ಪ್ರತೀಕವಾಗಿರುವ ಮಂಗಳೂರು ಮಹಾದಸರಾ ಉತ್ಸವವು ನಾಡಿನ ಜನತೆಗೆ ಶಾಂತಿ, ಪ್ರೀತಿ, ಸಮಾನತೆ ಮತ್ತು ಸಮೃದ್ಧಿಯ ಸಂದೇಶವನ್ನು ಸಾರಲಿ ಎಂಬುದು BYVNEWS ಆಶಯ.

🙏 ಸರ್ವರಿಗೂ ಮಂಗಳೂರು ಮಹಾದಸರಾ – 2026ರ ಹಾರ್ದಿಕ ಶುಭಾಶಯಗಳು.

BYVNEWS Voice of Society • Truthful News • Genuine Reporting

#BYVNEWS #MangaloreDasara2026 #Kudroli #GokarnanathTemple #DKShivakumar #JanardhanaPoojary #Mangalore

Leave a Reply

Your email address will not be published. Required fields are marked *