ಸೆ.20ರಂದು ದಸರಾ ಮಹೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ

📰 BYVNEWS
ಮಂಗಳೂರು | ಸೆ.20ರಂದು ದಸರಾ ಮಹೋತ್ಸವದ ಪೂರ್ವಭಾವಿ ಸಮಾಲೋಚನಾ ಸಭೆ
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅಕ್ಟೋಬರ್ 11ರಿಂದ 21ರವರೆಗೆ ವೈಭವದಿಂದ ನಡೆಯಲಿರುವ ಮಂಗಳೂರು ದಸರಾ ಮಹೋತ್ಸವದ ಪೂರ್ವಭಾವಿ ಸಿದ್ಧತೆ ಹಾಗೂ ಕಾರ್ಯಕ್ರಮಗಳ ಕುರಿತು ಸಮಾಲೋಚನಾ ಸಭೆ ಆಯೋಜಿಸಲಾಗಿದೆ.
ಕ್ಷೇತ್ರದ ನವೀಕರಣದ ರೂವಾರಿ ಹಾಗೂ ಹಿರಿಯ ಮಾರ್ಗದರ್ಶಕರಾದ ಶ್ರೀ ಬಿ. ಜನಾರ್ದನ ಪೂಜಾರಿ ಅವರ ನೇತೃತ್ವದಲ್ಲಿ ನಡೆಯಲಿರುವ ಮಂಗಳೂರು ದಸರಾ ಮಹೋತ್ಸವವನ್ನು ಯಶಸ್ವಿಯಾಗಿ ಆಯೋಜಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.
📅 ದಿನಾಂಕ: ಸೆಪ್ಟೆಂಬರ್ 20, ಭಾನುವಾರ
⏰ ಸಮಯ: ಬೆಳಗ್ಗೆ 11:00 ಗಂಟೆಗೆ
📍 ಸ್ಥಳ: ಶ್ರೀಕ್ಷೇತ್ರ ಕುದ್ರೋಳಿ ಸಭಾಂಗಣ, ಮಂಗಳೂರು
ಕ್ಷೇತ್ರದ ಭಕ್ತರು, ಹಿತೈಷಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಮೂಲ್ಯ ಸಲಹೆ-ಸಹಕಾರ ನೀಡುವಂತೆ ಮನವಿ ಮಾಡಲಾಗಿದೆ.
BYVNEWS | ಸತ್ಯ • ಧರ್ಮ • ನ್ಯಾಯ
#BYVNEWS #MangaloreDasara #Kudroli #GokarnanathKshetra #Mangalore #DasaraMahotsava #KarnatakaNews
